ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜನವರಿ 9 ರಂದು ಜಿ8 116 ವಿಮಾನವು ಬೆಳಿಗ್ಗೆ 6.30 ರ ಸುಮಾರಿಗೆ ದೆಹಲಿಗೆ ಹೊರಟ್ಟಿದ್ದ 55 ಪ್ರಯಾಣಿಕರನ್ನು ಬಸ್‌ನಲ್ಲಿಯೇ ಬಿಟ್ಟು ಟೇಕ್ ಆಫ್ ಆಗಿತ್ತು. ಹಲವಾರು ಟ್ವಿಟರ್ ಬಳಕೆದಾರರು ಈ ಬಗ್ಗೆ ದೂರಿದ್ದರು. ಈ ಟ್ವೀಟ್‌ಗಳಿಗೆ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ಖ್ಯಾತೆಯನ್ನು ಟ್ಯಾಗ್ ಮಾಡಲಾಗಿತ್ತು. ಬಳಿಕ ಈ ಪ್ರಯಾಣಿಕರಿಗೆ ನಾಲ್ಕು ಗಂಟೆಗಳ ನಂತರ ಅಂದರೆ ಬೆಳಗ್ಗೆ 10 ಗಂಟೆಗೆ ಹೊರಟಿದ್ದ ವಿಮಾನದಲ್ಲಿ ವಸತಿ ಕಲ್ಪಿಸಲಾಗಿತ್ತು ಎಂದು ವರದಿಯಾಗಿತ್ತು.
ಘಟನೆ ಬಳಿಕ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ಗೋ ಫಸ್ಟ್ ವಿಮಾನಯಾನ ಸಂಸ್ಥೆಗೆ ನೋಟಿಸ್ ಕಳುಹಿಸಿ, ವಿವರಣೆಯನ್ನು ಕೋರಿತ್ತು. ವಿಮಾನದಲ್ಲಿ ಪ್ರಯಾಣಿಕರು ಹತ್ತುವುದಕ್ಕೆ ಸಂಬಂಧಿಸಿದಂತೆ ಟರ್ಮಿನಲ್ ಸಂಯೋಜಕರು, ವಾಣಿಜ್ಯ ಸಿಬ್ಬಂದಿ ಮತ್ತು ಸಿಬ್ಬಂದಿ ನಡುವೆ ಅಸಮರ್ಪಕ ಸಂವಹನ, ಸಮನ್ವಯತೆ ಕಂಡುಬಂದಿದೆ ಎಂದು ಗೋ ಫಸ್ಟ್‌ನ ಪ್ರತಿಕ್ರಿಯೆ ನೀಡಿದೆ ಎಂದು ಡಿಜಿಸಿಎ ತಿಳಿಸಿದೆ.