ವಿಧಾನಸಭಾ ಕ್ಷೇತ್ರದ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಂಪ್ಲಿ ಕ್ಷೇತ್ರದಲ್ಲಿ ಚುನಾವಣಾ ಕಾವು ಹೆಚ್ಚುತ್ತಿದ್ದು ಪಕ್ಷದ ಅಭ್ಯರ್ಥಿಗಳ ಮಧ್ಯ ಈಗಾಗಲೇ ಹಗ್ಗ ಜಗ್ಗಾಟ ಬಿರಿಸಿಕೊಂಡಿದೆ, ಬಿಜೆಪಿಯಿಂದ ಮಾಜಿ ಶಾಸಕ ಟಿ ಹೆಚ್ ಸುರೇಶ್ ಬಾಬು ಟಿಕೆಟ್ ಖಚಿತವಾಗಿದ್ದು ತಾಲೂಕಿನಾದ್ಯಂತ ಸಭೆ ಸಮಾರಂಭಗಳಲ್ಲಿ ಸಕ್ರಿಯವಾಗಿದ್ದಾರೆ, ತಮ್ಮ ಅಧಿಕಾರ ಅವಧಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಹೇಳಿಕೊಳ್ಳುತ್ತಾ ಜನರ ಮಧ್ಯೆ ಬೆರೆಯುತ್ತಿದ್ದಾರೆ,,,
ಮತ್ತೊಂದೆಡೆ ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರೆನ್ನುವುದು ಮಾತ್ರ ನಿಗೂಢವಾಗಿದ್ದು, ತಾಲೂಕಿನಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ, ..
ರಾಮಸಾಗರ ನಾರಾಯಣಪ್ಪ ಸೂರ್ಯನಾರಾಯಣ ರೆಡ್ಡಿ ಅವರ ಆಶೀರ್ವಾದದಿಂದ ನನಗೆ ಕಾಂಗ್ರೆಸ್ ಟಿಕೆಟ್ ಪಕ್ಕ ಎಂದು ಹುಮ್ಮಸ್ಸಿನಿಂದ ಪ್ರಚಾರ ಮಾಡುತ್ತಿದ್ದಾರೆ, ಅಷ್ಟೇ ಅಲ್ಲದೆ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದಾರೆ,
, ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಅಭ್ಯರ್ಥಿ ಯಾರು ಎಂದು ಘೋಷಣೆ ಮಾಡದಿರುವುದು ಕ್ಷೇತ್ರದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ..
ಮತ್ತೊಂದೆಡೆ ಹಾಲಿ ಶಾಸಕ ಗಣೇಶ್ ಅವರು ರಾಮಸಾಗರ ನಾರಾಯಣಪ್ಪನವರ ನಡೆಯಿಂದ ವಿಚಲಿತರಾಗಿದ್ದಾರೆಂದು ಅವರ ಆಪ್ತ ವಲಯದಿಂದ ಕೇಳಿ ಬರುತ್ತಿರುವ ಮಾತು..
ಈ ಅಂತೆ ಕಂತೆಗಳ ಸಂತೆಯಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆತಂಕ ಉಂಟಾಗಿದೆ,
ಅಲ್ಲದೆ ಟಿಕೆಟ್ ಘೋಷಣೆ ಆಗದಿರುವುದು ಪ್ರಚಾರಕ್ಕೆ ಹಿನ್ನಡೆ ಉಂಟು ಮಾಡುವ ಸಾಧ್ಯತೆ ಇದೆ…
ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಹಾಲಿ ಶಾಸಕರ ವಿರುದ್ಧ ಬೇಸತ್ತು ಬಿಜೆಪಿ ಪಕ್ಷದತ್ತ ಮುಖ ಮಾಡಿರುವುದು ಶಾಸಕ ಗಣೇಶಗೆ ಮತ್ತಷ್ಟು ಹಿನ್ನಡೆ ಆಗಿದೆ…