ಮಧ್ಯರಾತ್ರಿ ಸುಮಾರು 12 ಗಂಟೆಗೆ ಅರ್ಚನಾ ಧೀಮನ್ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ. ಶವವನ್ನು ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿರಿಸಿ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ.
ಗೆಳೆಯನ ಸುತ್ತ ಅನುಮಾನದ ಹುತ್ತ
ಇನ್ನು ಅರ್ಚನಾ ಗೆಳೆಯ ಆದೀಶ್ ಸುತ್ತ ಅನುಮಾನ ಮೂಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತ ಅರ್ಚನಾ ಗೆಳೆಯ ಆದೀಶ್ನನ್ನು ಭೇಟಿಯಾಗಲು ದುಬೈನಿಂದ ಬೆಂಗಳೂರಿಗೆ ಬಂದಿದ್ದರು. ಕಳೆದ ಕೆಲ ವರ್ಷಗಳಿಂದ ಅರ್ಚನಾ ಮತ್ತು ಆದೀಶ್ ಪ್ರೀತಿಸುತ್ತಿದ್ರು. ಇದೀಗ ಗೆಳೆಯನ ಭೇಟಿಗೆ ಬಂದ ಅರ್ಚನಾ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಆದೀಶ್ ಕೇರಳ ಮೂಲದವನು ಎಂದು ತಿಳಿದು ಬಂದಿದೆ.
ಶುಕ್ರವಾರ ರಾತ್ರಿ ಇಬ್ಬರ ಮಧ್ಯೆ ಏನಾಗಿದೆ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇಬ್ಬರ ಮಧ್ಯೆ ಜಗಳ ನಡೆದು ಅರ್ಚನಾಳನ್ನು ನಾಲ್ಕನೇ ಮಹಡಿಯಿಂದ ತಳ್ಳಿ ಕೊಲೆ ಮಾಡಲಾಗಿದೆಯಾ ಎಂಬ ಆಯಾಮಾದಲ್ಲಿಯೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸಿಸಿಟಿವಿ ಕ್ಯಾಮೆರಾ ಪರಿಶೀಲನೆ
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೋರಮಂಗಲ ಪೊಲೀಸರು ಅಪಾರ್ಟ್ಮೆಂಟ್ ನಲ್ಲಿರುವ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸುತ್ತಿದ್ದಾರೆ.