ಯಾವುದೇ ಕಾರಣಕ್ಕೂ ಸಾರಿಗೆ ನೌಕರರ ಮುಷ್ಕರ ನಡೆಯಲ್ಲ- ಶ್ರೀರಾಮುಲು

Byವರದಿಗಾರ

Mar 20, 2023

ಬಳ್ಳಾರಿ ನಗರದ ಸ್ವಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಕ್ಷೇತ್ರದಲ್ಲಿ ಸೇವೆ ಮಾಡಿದ್ದೇನೆ. ಈಗ ಮತ್ತೊಮ್ಮೆ ಅಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ. ಈ ಬಗ್ಗೆ ಹೈಕಮಾಂಡ್‌ಗೂ ತಿಳಿಸಿದ್ದು, ಬಹುತೇಕ ಎಲ್ಲರ ಅಪೇಕ್ಷೆ ಮೇರೆಗೆ ಬಳ್ಳಾರಿ ಗ್ರಾಮೀಣದಿಂದಲೇ ಸ್ಪರ್ಧೆ ಮಾಡುವೆ ಎಂದರು.

ಸಾರಿಗೆ ಸಿಬ್ಬಂದಿಗಳ ಮುಷ್ಕರದ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಸಾರಿಗೆ ಸಿಬ್ಬಂದಿ ಜೊತೆಗೆ ಮಾತನಾಡಲಾಗುತ್ತದೆ. ಯಾವುದೇ ಕಾರಣಕ್ಕೂ ಮುಷ್ಕರ ಮಾಡುವುದಿಲ್ಲ. ವೇತನ ಪರಿಷ್ಕರಣೆ ವಿಚಾರದಲ್ಲಿ ಕರೆದು ಮಾತನಾಡಿದ್ದೇನೆ. ಹಣಕಾಸಿನ ಇತಿಮಿತಿಯಲ್ಲಿ ಒಂದಷ್ಟು ಮಾಡುತ್ತೇನೆ ಎಂದಿದ್ದೇ. ಅದಕ್ಕೆ ಅವರು ಒಪ್ಪಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಮಾತನಾಡಿ, ಗುರುವಾರ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಡಿಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ರಾಮುಲು

ಕಳೆದ ಬಾರಿ ಉತ್ತರ ಕರ್ನಾಟಕದಲ್ಲಿ ನಮಗೆ ಸಂಖ್ಯೆ ಕಡಿಮೆಯಾಗಿತ್ತು. ಇದರಿಂದಾಗಿ ಸರ್ಕಾರ ರಚನೆ ಮಾಡಲು ಕಷ್ಟವಾಗಿತ್ತು. ಆದರೆ ಈ ಬಾರಿ ನೂರಕ್ಕೆ ನೂರರಷ್ಟು ಬಹುಮತ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಾಗ ಒಳ್ಳೆಯ ಅವಕಾಶ ನನಗೆ ಸಿಕ್ಕೇ ಸಿಗುತ್ತದೆ ಎನ್ನುವ ಮೂಲಕ ಶ್ರೀರಾಮುಲು ಅವರು ಮತ್ತೊಮ್ಮೆ ಉಪ ಮುಖ್ಯಮಂತ್ರಿ ಅಗುವ ಇಂಗಿತ ವ್ಯಕ್ತಪಡಿಸಿದರು.